ತುಮಕೂರು: ಇನ್ನು ಮುಂದೆ ಪ್ರತಿ ವರ್ಷ 75,000 ವೈದ್ಯಕೀಯ ಸೀಟು ಸೃಜನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕೆಂಬ ಉದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಮುಂದಿನ ವರ್ಷದಿಂದ ಪ್ರತಿ ವರ್ಷ 75000 ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೃಜಿಸಲು ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಭಾಗದ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಈ ವರ್ಷ ಬಜೆಟ್ ನಲ್ಲಿ ಕೇಂದ್ರ ಸರ್ಕಾರ 37,223 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಇದರಲ್ಲಿ ಕರ್ನಾಟಕಕ್ಕೆ 9464 ಕೋಟಿ ರೂ. ಸಿಕ್ಕಿದೆ ಎಂದು ತಿಳಿಸಿದ್ದಾರೆ.
You Might Also Like
TAGGED:ವಿದ್ಯಾರ್ಥಿ