HomeLatest NewsBREAKING: ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ಬೆಂಕಿ; ಅಂಗಡಿಗಳೂ ಸುಟ್ಟು ಕರಕಲು:...

BREAKING: ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ಬೆಂಕಿ; ಅಂಗಡಿಗಳೂ ಸುಟ್ಟು ಕರಕಲು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ಕೃತ್ಯ ಶಂಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ರಸ್ತೆಬದಿ ನಿಲ್ಲಿಸಿಂದ ಬೈಕ್ ಗಳಿಗೆ, ಅಂಗಡಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ.

ಹಲಸೂರು ಬಳಿ ಇಂದು ಮುಂಜಾನೆ ರಸ್ತೆ ಬದಿ ನಿಂತಿದ್ದ 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಸ್ಥಳೀಯ ನಿವಾಸಿಗಳು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನದಿಸಿದ್ದಾರೆ. ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular