ಮುಂಬೈ: ಅರಬ್ಬಿ ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಇಲ್ಲಿನ ಗೀತಾನಗರದ ಸಮುದ್ರ ತೀರದಲ್ಲಿ ಯುವಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನುಇಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನ ಅಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಕಾನ್ಸ್ ಟೇಬಲ್ ರಾಂಧ್ವೆ, ಸ್ಥಳೀಯ ಮೀನುಗಾರರ ಸಹಾಯದಿಂದ ಸಮುದ್ರಕ್ಕೆ ಇಳಿದು ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ವಿಕಾಸ್ ಖಾಂಡೆ (25) ರಕ್ಷಿಸಲ್ಪಟ್ಟ ಯುವಕ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.