ಬೆಂಗಳೂರು: ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಪೋಸ್ಟ್ ಮಾಡಿರುವುದರ ವಿರುದ್ಧ ಸಿಡಿದೆದ್ದಿರುವ ನಟಿ ರಮ್ಯಾ, ಕಾನೂನು ಹೋರಾಟಕ್ಕೂ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ನಟ ಪ್ರಥಮ್ ನಟಿ ರಮ್ಯಾ ಬೆಂಬಲಕ್ಕೆ ನಿಂತಿದ್ದಾರೆ.
ನಾನು ರಮ್ಯಾ ಮೇಡಂ ಘನತೆಗೆ ಬೆಂಬಲ ನೀಡುತ್ತೇನೆ. ಎಲ್ಲರೂ ನಟಿ ರಮ್ಯಾ ಪರ ನಿಲ್ಲೋಣ. ಈಗಲೂ ನಾವು ನಟಿ ರಮ್ಯಾ ಅವರ ಆತ್ಮಗೌರವದ ಪರ ನಿಲ್ಲದೆ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು. ಕನ್ನಡ ಚಿತ್ರರಂಗವನ್ನು ಭಯಮುಕ್ತಗೊಳಿಸೋಣ ಎಂದು ಕರೆ ನೀಡಿದ್ದಾರೆ.
ಇಷ್ಟೆಲ್ಲ ಆದರೂ ಜಾಣಕಿವುಡರಾಗಿರುವ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರು ಕಾಲ ಬಾಳುವ ಆಯಸ್ಸು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಕುಟುಂಬದ ಪರ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗುತ್ತಿದ್ದಾರೆ. ರಮ್ಯಾ ಅವರಿಗೆ ಸೋಷಿಯಲ್ ಮೀಡಿಯಾಗಳಲ್ಲಿ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದು, ಇದರ ವಿರುದ್ಧ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.