HomeLive NewsGOOD NEWS : ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : 'ಬಾಪೂಜಿ ಸೇವಾ...

GOOD NEWS : ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ 208 ಹೊಸ ಸೇವೆ ಆರಂಭ

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 208 ಸೇವೆ ಆರಂಭಿಸಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಹೌದು. ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸದ್ಯ ನೀಡುತ್ತಿರುವ 81 ಸೇವೆಗಳ ಜೊತೆಗೆ ಇನ್ನೂ 208 ಸೇವೆಗಳನ್ನು ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗಾಗಲೇ 81 ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದರೊಂದಿಗೆ ನೂತನ 208 ಸರ್ಕಾರಿ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಾಗುವುದು. 2024-25 ನೇ ಸಾಲಿನ ಬಜೆಟ್’ನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯವನ್ನು ಒದಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ 46 ವಿವಿಧ ಇಲಾಖೆಗಳ 800ಕ್ಕಿಂತಲೂ ಹೆಚ್ಚು ಸೇವೆಗಳಲ್ಲಿ ಗ್ರಾಮೀಣ ಜನತೆಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒದಗಿಸುವುದರಿಂದ ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ನೀಡಿದಂತಾಗುತ್ತದೆ. ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳು ಮತ್ತು ಆನ್ಲೈನ್ ವೆಬ್ಸೈಟ್ ಹಾಗು ಮೊಬೈಲ್ ಅಪ್ಲಿಕೇಶನ್ ಮೂಲಕವೂ ಈ ಸೇವೆಗಳನ್ನು ಪಡೆಯಬಹುದು ಎಂದು ಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular