HomeKarnatakaBREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು 'ಪೊಲೀಸ್ ಕಮಿಷನರ್' ಗೆ...

BREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ.!

ಬೆಂಗಳೂರು : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಕಮಿಷನರ್ ಕಚೇರಿಗೆ ಆಗಮಿಸಿದ ನಟಿ ರಮ್ಯಾ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಕಮಿಷನರ್ ಸೀಮಂತ್ ಕುಮಾರ್ ಗೆ ನಟಿ ರಮ್ಯಾ ದೂರು ನೀಡಿದ್ದಾರೆ. ದೂರು ಕೊಟ್ಟ ಬಳಿಕ ನಟಿ ರಮ್ಯಾ ಯಾವ ರೀತಿ ಪ್ರತಿಕ್ರಿಯೆ ನೋಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ತಪ್ಪಿತಸ್ಥರ ವಿರುದ್ಧ ಕ್ರಮವಾದರೆ 3-7 ವರ್ಷ ಜೈಲು ಶಿಕ್ಷೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೂ, ನಟ ದರ್ಶನ್ ಫ್ಯಾನ್ಸ್ ಹೆಸರಲ್ಲಿ ನಟಿ ರಮ್ಯಾ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ರಮ್ಯಾ ಪರ ನಿಂತಿದ್ದು, . ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಮುಂದಾಗಿದೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ನಟಿ ರಮ್ಯಾ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಮೆಸೇಜ್ ಗಳನ್ನು ಬ್ಲಾಕ್ ಮಾಡುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.

ನಟಿ ರಮ್ಯಾ ದೂರು ದಾಖಲಿಸಿದರೆ ತಪ್ಪಿತಸ್ಥರಿಗೆ 3-7 ವರ್ಷ ಜೈಲು ಶಿಕ್ಷೆಯಾಗಲಿದೆ. ಇದು ನಟಿ ರಮ್ಯಾ ಅಂತಾ ಅಲ್ಲ, ಯಾವುದೇ ಹೆಣ್ಣುಮಕ್ಕಳಿಗೆ ಸೋಷಿಯಲ್ ಮೀಡಿಯಾಗಳಲ್ಲಿ, ಅಥವಾ ಎಲ್ಲಿಯೇ ಆಗಲಿ ಕೆಟ್ಟ ಪದಬಳಕೆ, ಕೆಟ್ಟ ಮಾತುಗಳನ್ನಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವ ಮಹಿಳೆಯರಿಗೂ ಅಗೌರವತೋರುವಂತಿಲ್ಲ. ಸೋಷಿಯಲ್ ಮೀಡಿಯಾಗಳಲ್ಲಿ ಕೆಟ್ಟದಾಗಿ ಕಮೆಂಟ್ ಹಾಕುವ ಮುನ್ನ ನಿಮ್ಮ ಭವಿಷ್ಯದ ಬಗ್ಗೆ ಯೋಚಿಸಿ. ನೀವು ಹಾಕುವ ಅಶ್ಲೀಲ ಕಮೆಂಟ್, ಪದ ಬಳಕೆ ಮುಂದೆ ನಿಮ್ಮನ್ನು ಜೈಲುಗೂ ಕಳುಹಿಸಬಹುದು. ಅಶ್ಲೀಲ ಪದ ಬಳಕೆ, ಮೆಸೇಜ್ ಗಳ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮವಾದರೆ 3-7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ನಾಗಲಕ್ಷ್ಮೀ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular