HomeLatest Newsಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ರದ್ದು ಮಾಡಿದೆ.

52 ದಿನಗಳ ನಂತರ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಡಿಸಿಪಿ ಶೇಖರ್, ಎಸಿಪಿ ಹೆಚ್‌.ಟಿ. ಬಾಲಕೃಷ್ಣ ಮತ್ತು ಕಬ್ಬನ್ ಪಾರ್ಕ್ ಠಾಣೆಯ ಇನ್ಸ್ಪೆಕ್ಟರ್ ಗಿರೀಶ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಹಾಗೂ ಜಿಲ್ಲಾಧಿಕಾರಿಗಳ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಸರ್ಕಾರ ಅಮಾನತು ನಿರ್ಧಾರವನ್ನು ಹಿಂಪಡೆದುಕೊಂಡಿದೆ. ನಿಯಮಾವಳಿಯ ಪ್ರಕಾರ ಅಮಾನತು ಆದೇಶ ರದ್ದು ಮಾಡಿ ನಾಲ್ಬರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಶ್ಚಿಮ ವಲಯ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿ ರದ್ದು ಮಾಡಿತ್ತು. ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಃ ಸೇವೆಗೆ ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಆದೇಶಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular