BREAKING NEWS: ರಾಜ್ಯದ ಬೇಡಿಕೆಯಂತೆ ರಸಗೊಬ್ಬರ ಪೂರೈಕೆ: ಕೇಂದ್ರ ಸಚಿವ ಜೆ.ಪಿ. ನಡ್ಡಾ ಭರವಸೆ

ನವದೆಹಲಿ: ನವದೆಹಲಿಯಲ್ಲಿ ಇಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಅಗತ್ಯ ರಸಗೊಬ್ಬರ ಪೂರೈಕೆಗೆ ಮನವಿ ಸಲ್ಲಿಸಲಾಗಿದೆ.

ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರಾಜ್ಯದ ರೈತರಿಗೆ ಬೇಕಾದ ರಸಗೊಬ್ಬರಗಳನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಸರಿಯಾದ ಕ್ರಮದಲ್ಲಿ ಅದನ್ನು ಬಳಸಬೇಕಿದೆ. ರಾಜ್ಯದಲ್ಲಿ ರಸಗೊಬ್ಬರದ ಬೇಡಿಕೆ ಇನ್ನೂ ಹೆಚ್ಚಿದ್ದು, ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡುವಂತೆ ಕೋರಿ ಮನವಿ ಸಲ್ಲಿಸಲಾಯಿತು.

ಮನವಿಗೆ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಜೆ.ಪಿ ನಡ್ಡಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ರಸಗೊಬ್ಬರ ಪೂರೈಕೆ ಮಾಡುವ ಭರವಸೆ ಇದೆ.

ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ, ಸಂಸದರಾದ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ. ಗದ್ದಿಗೌಡರ, ರಮೇಶ ಜಿಗಜಿಣಗಿ, ಡಾ.ಕೆ. ಸುಧಾಕರ್, ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read