BREAKING : ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜ್ : ನಟಿ ರಮ್ಯಾ ಬೆಂಬಲಕ್ಕೆ ನಿಂತ ‘FIRE’ ಸಂಸ್ಥೆ.!

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಬೆಂಬಲಕ್ಕೆ FIRE ಸಂಸ್ಥೆ ಬಂದಿದೆ. ನಟಿ ರಮ್ಯ ಅವರ ವಿರುದ್ಧ ನಡೆಯುತ್ತಿರುವ ಮಹಿಳಾ-ವಿರೋಧಿ ಮತ್ತು ಅಶ್ಲೀಲ ಟ್ರೋಲಿಂಗ್ ವಿರುದ್ಧ ಅವರ ಹೋರಾಟಕ್ಕೆ ಫೈರ್ FIRE ಸಂಸ್ಥೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ನಟ ಚೇತನ್ ಅಹಿಂಸಾ ಪೋಸ್ಟ್ ಹಂಚಿಕೊಂಡಿದ್ದಾರೆ.

ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ & ಈಕ್ವಾಲಿಟಿ (FIRE) ಸಂಸ್ಥೆಯು ನಟಿ ಹಾಗೂ ಮಾಜಿ ಸಂಸದರಾದ ರಾಷ್ಟ್ರ (ದಿವ್ಯ ಸ್ಪಂದನ) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಶ್ಲೀಲ ಹಾಗೂ ಮಹಿಳಾವಿರೋಧಿ ಟ್ರೋಲಿಂಗ್ ಅನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ರಮ್ಮ ರವರಿಗೆ ನಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತದೆ.ಭಾರತದ ಸಂವಿಧಾನದಲ್ಲಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಹಕ್ಕುಗಳು (ಆರ್ಟಿಕಲ್ 19) ನಮ್ಮ ಪ್ರಜಾಪ್ರಭುತ್ವದ ಬಾಳಿಗೆ ಅಧಾರಸ್ತಂಭವಾಗಿವೆ.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು ಅವುಗಳ ನಡುವೆ ಸಂವಾದ ನಡೆಯಬೇಕು. ಆದರೆ ಆ ಸಂವಾದ ಸಭ್ಯತೆಯೊಂದಿಗೆ ಮತ್ತು ಗೌರವಪೂರ್ಣವಾಗಿ ನಡೆಯಬೇಕು.ರಮ್ಮ ಅವರ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ದೌರ್ಜನ್ಯ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾಗಿದೆ ಮತ್ತು ಇದು ಆನ್ಲೈನ್ ಮಹಿಳಾ ದ್ವೇಷದ ಆಳವಾದ ಸಮಸ್ಯೆಯನ್ನು ತೋರಿಸುತ್ತದೆಮಹಿಳೆಯರ ವಿರುದ್ಧದ ಅವಮಾನಕಾರಕ ಸಾಮಾಜಿಕ ಜಾಲತಾಣ ಪೋಸ್ಟ್ಗಳು ಭಾರತ ದಂಡಸಂಹಿತೆಯ ಸೆಕ್ಷನ್ಗಳು (499, 500, 505(2), 509) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (ಸೈಬರ್ ಕಾನೂನು) ಅಡಿಯಲ್ಲಿ ದಂಡನೀಯವಾಗಿವೆ. ಕರ್ನಾಟಕ ಗೃಹ ಇಲಾಖೆ ಮತ್ತು ಸೈಬರ್ ಕ್ರೈಮ್ ಪ್ರಾಧಿಕಾರಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು FIRE ಸಂಸ್ಥೆಯು ಒತ್ತಾಯಿಸುತ್ತಿದೆ ಎಂದು FIRE ಸಂಸ್ಥೆ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read