ಚಾಮರಾಜನಗರ : ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ರಸ್ತೆಗೆ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದ್ದು, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ನಾಳೆ, ನಾಡಿದ್ದು 2 ದಿನ ಪ್ರವೇಶ ನಿರ್ಬಂಧಿಸಲಾಗಿದೆ.
ನಾಳೆ ಹಾಗೂ ನಾಡಿದ್ದು 2 ದಿನ ದುರಸ್ತಿ ಕಾರ್ಯ ನಡೆಯುವ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಡಿಸಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನ ಬಹಳ ಪ್ರಸಿದ್ದ ಪಡೆದಿದೆ.
ಹಿಮವದ್ ಗೋಪಾಲ ಸ್ವಾಮಿ ಬೆಟ್ಟ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿದೆ. ಮೈಸೂರಿನ ದಕ್ಷಿಣಕ್ಕೆ ಸುಮಾರು ೮೦ ಕಿ.ಮೀ. ದೂರದಲ್ಲಿ ಊಟಿ ಹೆದ್ದಾರಿಯ ಅಂಚಿನಲ್ಲಿರುವ ಈ ಬೆಟ್ಟವು ಅದ್ಭುತ ಪ್ರಕೃತಿ ಸೌಂದರ್ಯದ ತಾಣ. ಸಮುದ್ರಮಟ್ಟದಿಂದ ಸುಮಾರು ೧೪೫೪ ಮೀ. ಎತ್ತರದಲ್ಲಿ ಮಲೆಯ ಮೇಲೆ ಶ್ರೀಕೃಷ್ಣನ ದೇವಾಲಯವಿದೆ.