ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ, ಕೊಡಗು, ಚಿತ್ರದುರ್ಗ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದ ಫಾರ್ಮ್ ಹೌಸ್ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಹಿನ್ನೆಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
You Might Also Like
TAGGED:ಲೋಕಾಯುಕ್ತ ದಾಳಿ