HomeLatest NewsBREAKING: 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ನಟೋರಿಯಸ್ ಕಳ್ಳರ ಬಂಧನ: 343 ಗ್ರಾಂ ಚಿನ್ನ ವಶ

BREAKING: 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ನಟೋರಿಯಸ್ ಕಳ್ಳರ ಬಂಧನ: 343 ಗ್ರಾಂ ಚಿನ್ನ ವಶ

ಬೆಂಗಳೂರು: ನೆಲಮಂಗಲದಲ್ಲಿ ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಲಾಗಿದೆ. ನೆಲಮಂಗಲ ಟೌನ್ ಪೋಲಿಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಮತ್ತು ಯತೀಶ್ ಅವರನ್ನು ಬಂಧಿಸಲಾಗಿದೆ. ನೆಲಮಂಗಲದ ಇಂಜಿನಿಯರ್ ಮನೆಯೊಂದರಲ್ಲಿ ಕಳ್ಳತನ ನಡೆಸಿದ್ದರು. 56 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಖತರ್ನಾಕ್ ಕಳ್ಳರು ದೋಚಿದ್ದರು.

ಆರೋಪಿಗಳು 1/2 ಕೆಜಿಗೂ ಹೆಚ್ಚು ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಬಂಧಿತರಿಂದ 343 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 25- 26 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular