HomeLatest NewsBREAKING: ಯಾತ್ರಿಗಳಿದ್ದ ಬಸ್ ಗೆ ಸಿಲಿಂಡರ್ ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಮಂದಿ ಸಾವು

BREAKING: ಯಾತ್ರಿಗಳಿದ್ದ ಬಸ್ ಗೆ ಸಿಲಿಂಡರ್ ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಮಂದಿ ಸಾವು

ದಿಯೋಘರ್: ಜಾರ್ಖಂಡ್‌ ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಐವರು ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್, ಗ್ಯಾಸ್ ಸಿಲಿಂಡರ್ ತುಂಬಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ಬೆಳಿಗ್ಗೆ 4:30 ರ ಸುಮಾರಿಗೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ಸ್‌ಪೆಕ್ಟರ್ ಜನರಲ್(ದುಮ್ಕಾ ವಲಯ) ಶೈಲೇಂದ್ರ ಕುಮಾರ್ ಸಿನ್ಹಾ ಮಾಹಿತಿ ನೀಡಿ, ದಿಯೋಘರ್‌ ನ ಮೋಹನಪುರ ಪೊಲೀಸ್ ಠಾಣೆಯ ಜಮುನಿಯಾ ಅರಣ್ಯದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ 32 ಆಸನಗಳ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular