ಬೆಂಗಳೂರು : ಬೆಂಗಳೂರಿನಲ್ಲಿ ರಕ್ಕಸ ಬೀದಿನಾಯಿಗಳ ದಾಳಿಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೀತಪ್ಪ (71) ಎಂಬ ವ್ಯಕ್ತಿ ಬೀದಿನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ವಾಕಿಂಗ್ ಹೋಗುತ್ತಿದ್ದ ಸೀತಪ್ಪನ ಮೇಲೆ ದಾಳಿ ನಡೆಸಿದ ನಾಯಿಗಳು ಸೀತಪ್ಪನ ದೇಹದ ಭಾಗಗಳನ್ನು ಕಚ್ಚಿ ತಿಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸೀತಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
TAGGED:ಬೀದಿನಾಯಿ