HomeLatest NewsBREAKING : ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕೆ ಜಗಳ : ಮಗನ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ...

BREAKING : ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕೆ ಜಗಳ : ಮಗನ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ.!

ಬೆಂಗಳೂರು : ಆಸ್ತಿ ವಿಚಾರಕ್ಕೆ ಜಗಳ ನಡೆದು ಪಾಪಿ ಪತಿಯೋರ್ವಮಗನ ಜೊತೆ ಸೇರಿ ಪತ್ನಿಯನ್ನು ಕೊಂದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕುರುಬರದೊಡ್ಡಿಯಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಗೌರಮ್ಮ (45) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಪತಿ ಶಿವರಾಜು (48) ಮಗ ಸಿದ್ದರಾಜು ಬಂಧನವಾಗಿದೆ.

ಪತಿ, ಮಗನಿಂದ ಹಲವು ವರ್ಷಗಳಿಂದ ದೂರ ಇದ್ದ ಗೌರಮ್ಮ ತನ್ನ ಹೆಸರಿನಲ್ಲಿದ್ದ ಜಮೀನು ಮಾರಾಟ ಮಾಡಲು ಮಂದಾಗಿದ್ದರು. ಈ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ. ಜಮೀನನಲ್ಲೇ ಪತಿ, ಪತ್ನಿ ಹಾಗೂ ಮಗನ ನಡುವೆ ಗಲಾಟೆ ಆಗಿದೆ. ಗಲಾಟೆ ತಾರಕಕ್ಕೇರಿದ್ದು, ಜಮೀನನಲ್ಲೇ ತಂದೆ ಹಾಗೂ ಮಗ ಮಾರಕಾಸ್ತ್ರಗಳಿಂದ ಹೊಡೆದು ಗೌರಮ್ಮಳನ್ನು ಕೊಲೆ ಮಾಡಿದ್ದಾರೆ. ಈ ಸಂಬಂಧ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತಿ ಶಿವರಾಜು (48) ಮಗ ಸಿದ್ದರಾಜುನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular