ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮುಂದಿನ ಅಕ್ಟೋಬರ್ ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭ ಆರಂಭಿಸಲಾಗುವುದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದೆ. ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಚುನಾವಣೆ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡ ಇಳಿಸಲು ಈ ಕ್ರಮ ಕೈಗೊಂಡಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

