ಬೆಂಗಳೂರು: ಕೆಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಜುಲೈ 30 ರಂದು ನಿರ್ಧಾರವಾಗಲಿದೆ.
26 ಸಾಕ್ಷಿಗಳ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೇ ಅಲ್ಲವೇ ಎಂದು ತೀರ್ಪು ಪ್ರಕಟಿಸಲಿದೆ. ಕಳೆದ 14 ತಿಂಗಳಿನಿಂದ ಜೈಲುವಾಸಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ನಾಳಿನ ತೀರ್ಪು ಮಹತ್ವದ್ದಾಗಿದೆ.
ಸರಣಿ ಅತ್ಯಾಚಾರ ಆರೋಪದಡಿ ಪ್ರಜ್ವಲ್ ರೇವಣ್ಣ ಬಂಧಿತರಾಗಿದ್ದರು. ಕೆಆರ್ ನಗರ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.