HomeLatest NewsBIG NEWS: ಖಾಸಗಿ ವಲಯದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ ಬೇಡಿಕೆ ಪರಿಶೀಲನೆ: ಸಂತೋಷ್...

BIG NEWS: ಖಾಸಗಿ ವಲಯದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ ಬೇಡಿಕೆ ಪರಿಶೀಲನೆ: ಸಂತೋಷ್ ಲಾಡ್

ಕಾರವಾರ: ಖಾಸಗಿ ವಲಯದಲ್ಲಿ ದೈನಂದಿನ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಳ ಮಾಡುವ ಕುರಿತಾಗಿ ಕಂಪನಿಗಳು ಬೇಡಿಕೆ ಇಟ್ಟಲ್ಲಿ ಪರಿಶೀಲನೆ ನಡೆಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಕಾರವಾರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಏರಿಕೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲಸದ ಅವಧಿ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೆಲವು ಸಂಸ್ಥೆಗಳ ಮಾಲೀಕರು ಇದನ್ನು ಜಾರಿಗೊಳಿಸುವಂತೆ ಸಲಹೆ ನೀಡಿದ್ದಾರೆ. ಆದರೆ ಈ ಬಗ್ಗೆ ಕಾರ್ಮಿಕ ವಲಯದಿಂದ ಯಾರೂ ಪೂರಕವಾಗಿ ಪ್ರತಿಕ್ರಿಯೆ ನೀಡಿಲ್ಲ. ಈ ಕುರಿತು ಮುಖ್ಯಮಂತ್ರಿಗಳು, ಎಲ್ಲಾ ಸಚಿವರ ಜೊತೆಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular