HomeLatest Newsಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಅಂತಿಮ ತೀರ್ಪು ಪ್ರಕಟ

ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಅಂತಿಮ ತೀರ್ಪು ಪ್ರಕಟ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆಆರ್ ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದ ಅಂತಿಮ ತೀರ್ಪು ಪ್ರಕಟಿಸಲಿದೆ.

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಸಾಬೀತಾದಲ್ಲಿ ಜೈಲು ಶಿಕ್ಷೆ ಖಚಿತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರಂದು ವಾದ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು ತೀರ್ಪು ಪ್ರಕಟಿಸಲಿದ್ದಾರೆ.

ಜೈಲು ಅಧಿಕಾರಿಗಳು ತೀರ್ಪು ಪ್ರಕಟಿಸುವ ವೇಳೆ ಆರೋಪಿ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿವೆ. ಇವುಗಳಲ್ಲಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಜ್ವಲ್ ಪ್ರಕರಣದಲ್ಲಿ ಪ್ರಕಟವಾಗುತ್ತಿರುವ ಮೊದಲ ತೀರ್ಪು ಇದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular