HomeLatest NewsBIG NEWS: ಧಾರಾಕಾರ ಮಳೆ: ಅಮರನಾಥ ಯಾತ್ರೆ ಸ್ಥಗಿತ

BIG NEWS: ಧಾರಾಕಾರ ಮಳೆ: ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ: ಭಾರಿ ಮಳೆ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ತಾತಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್, ಬಲ್ತಾಲ್ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ ಎಂದು ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಈವರೆಗೆ 3.93 ಲಕ್ಷಕ್ಕೂ ಅಧಿಕ ಯಾತ್ರಿಕರು ಪವಿತ್ರ ಅಮರನಾಥ ಗುಹಾ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಗುರುವಾರ ಭಗವತಿ ನಗರ ಮೂಲ ಶಿಬಿರದಿಂದ ಯತರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರಿ ಮಳೆಯಿಂದಾಗಿ ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಜುಲೈ 31ರವರೆಗೆ ಭಗವತಿ ನಗರದಿಂದ ಜಮ್ಮುವಿನಿಂದ ಬಾಲ್ಟಾಲ್ ಮತ್ತು ನುನ್ವಾನ್ ನ ಮೂಲ ಶಿಬಿರಗಳ ಕಡೆಗೆ ಯಾವುದೇ ಬೆಂಗಾವಲು ಸಂಚಾರವನ್ನು ಅನುಮತಿಸಲಗೌವುದಿಲ್ಲ ಎಂದು ಡಿಐಪಿಆರ್ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular