ತುಮಕೂರು: ಅತಿಥಿ ಶಿಕ್ಷಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.
ನಾಗರತ್ನ (34) ಆತ್ಮಹತ್ಯೆಗೆ ಶರಣಾದ ಅತಿಥಿ ಶಿಕ್ಷಕಿ. ಮುದ್ದನೇರಳೆಕೆರೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿದ್ದ ನಾಗರತ್ನ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಸ್ಜರಣಾಗಿದ್ದಾರೆ.
ನಾಗರತ್ನ ಪತಿ ಲಾರಿ ಚಾಲಕರಾಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಪತಿ ಕೆಲಸಕ್ಕೆ ಹೋದ ಬಳಿಕ ನಾಗರತ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಬಗ್ಗೆ ಜನರು ಕೆಟ್ಟದಾಗಿ ಮಾತನಾಡಿಕೊಳುತ್ತಿದ್ದಾರೆ. ಇದರಿಂದ ಆತ್ಮಾತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ಗಂಡ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.