ಪ್ರೋತ್ಸಾಹಧನಕ್ಕಾಗಿ ಸರ್ಕಾರಿ ಶಾಲೆಗಳಿಂದ ಪ್ರಸ್ತಾವನೆ ಸಲ್ಲಿಸಲು ಅವಕಾಶ

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ನೇ ಸಾಲಿನಲ್ಲಿ ನಮ್ಮೂರು ಶಾಲೆಗೆ ನಮ್ಮ ಯುವಜನರು ಕಾರ್ಯಕ್ರಮದಡಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ , ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾ ಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು 2024-25ನೇ ಸಾಲಿನಲ್ಲಿ ಉತ್ತಮ ಸಾಧನೆ ತೋರಿದ್ದಲ್ಲಿ ದೈಹಿಕ ಶಿಕ್ಷಕರ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಪ್ರಸ್ತಾವನೆಯನ್ನು ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಜುಲೈ 31 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಶ್ರೀಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಗೇಟ್ ನಂ.12, ಕೊಠಡಿ ಸಂಖ್ಯೆ : 17-18, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ : 080-22239771 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read