ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ :    ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ನೋಂದಾಯಿಸಿಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳು/ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡುವುದರ ಮೂಲಕ ರೈತರಿಗೆ ನೆರವಾಗುತ್ತದೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು ಮತ್ತು ಸಿರುಗುಪ್ಪ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಹಸಿಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಯನ್ನು ಅಧಿಸೂಚಿಸಲಾಗಿದೆ.

ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 11 ಕೊನೆಯ ದಿನ. ವಿಮಾ ಕಂಪನಿ-ಎಸ್‌ಬಿಐ ಇನ್ಸುರೆನ್ಸ್.

*ಹಸಿಮೆಣಸಿನಕಾಯಿ:* ವಿಮಾ ಮೊತ್ತ-ರೂ.71,000(ಪ್ರತಿ ಹೆಕ್ಟೇರ್‌ಗೆ), ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ(ಪ್ರತಿ ಹೆಕ್ಟೇರ್‌ಗೆ)-ರೂ.3,550.

*ದಾಳಿಂಬೆ:* ವಿಮಾ ಮೊತ್ತ-ರೂ.1,27,000(ಪ್ರತಿ ಹೆಕ್ಟೇರ್‌ಗೆ), ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ(ಪ್ರತಿ ಹೆಕ್ಟೇರ್‌ಗೆ)- ರೂ.6,350 ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ-ದೂ.08392-278177. ಮೊ.9448511649. ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ-ದೂ.08395-260389, ಮೊ.9740934208. ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ-ದೂ.08396-222066, ಮೊ.9448910277 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read