ದೊಡ್ಡಬಳ್ಳಾಪುರ : ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ ಇಬ್ಬರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಕೊಲೆ ಬೆದರಿಕೆ ಆರೋಪದ ಮೇರೆಗೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ದೂರು ನೀಡಿದ್ದರು. ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಆಗಮಿಸಿದ ನಟ ಪ್ರಥಮ್ ಬೇಕರಿ ರಘು & ಗ್ಯಾಂಗ್ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.ಕಳೆದ ಜುಲೈ 22 ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್ ಗೆ ಡ್ರಾಗರ್ ನಿಂದ ಹಲ್ಲೆಗೆ ಯತ್ನಿಸಿದ್ದು ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು.