ಕಲಬುರಗಿ: ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಆಲಂದ ತಾಲೂಕಿನ ಕಡಗಂಚಿ ಬಳಿಯಿರುವ ಕೇಂದ್ರೀಯ ವಿವಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 21 ವರ್ಷದ ಜಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಗಿರುವ ವಿದ್ಯಾರ್ಥಿನಿ. ಒಡಿಶಾ ಮೂಲದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ನರೋಣ ಠಾಣೆ ಪೊಲೀಸರು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TAGGED:ವಿದ್ಯಾರ್ಥಿನಿ