HomeLatest Newsಆಹಾರ ಸುರಕ್ಷತಾ ಇಲಾಖೆಯಲ್ಲಿ ‘ಆಯುಷ್’ ಪ್ರಯೋಗಾಲಯ ವಿಲೀನ: ಆರೋಗ್ಯ ಇಲಾಖೆ ಆದೇಶ

ಆಹಾರ ಸುರಕ್ಷತಾ ಇಲಾಖೆಯಲ್ಲಿ ‘ಆಯುಷ್’ ಪ್ರಯೋಗಾಲಯ ವಿಲೀನ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಲ್ಲಿ ಆಯುಷ್ ಇಲಾಖೆಯ ಆಯುರ್ವೇದ, ಸಿದ್ಧ ಮತ್ತು ಯುನಾನಿ ಔಷಧಗಳ ಅಮಲು ಜಾರಿ ವಿಭಾಗ ಮತ್ತು ಪರೀಕ್ಷಾ ಪ್ರಯೋಗಾಲಯವನ್ನು ವಿಲೀನಗೊಳಿಸಲಾಗಿದೆ.

ಆರೋಗ್ಯ ಇಲಾಖೆಯಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ. ಆಯುಷ್ ಇಲಾಖೆಯ ಆಯುರ್ವೇದ, ಸಿದ್ಧ ಮತ್ತು ಯುನಾನಿ ವಿಭಾಗದಲ್ಲಿ ಮಂಜೂರಾದ, ಹಾಲಿ ಜಾರಿಯಲ್ಲಿರುವ ಔಷಧ ಪರಿವೀಕ್ಷಕರು, ಸಹಾಯಕ ಔಷಧ ನಿಯಂತ್ರಕರು, ಉಪ ಔಷಧ ನಿಯಂತ್ರಕರು, ಬೆಂಗಳೂರಿನ ಪರೀಕ್ಷಾ ಪ್ರಯೋಗಾಲಯದ ತಾಂತ್ರಿಕ, ಲಿಪಿಕ ವೃಂದದ ಸಿಬ್ಬಂದಿ ಹುದ್ದೆಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಔಷಧ ನಿಯಂತ್ರಣ ವಿಭಾಗದಲ್ಲಿ ವಿಲೀನಗೊಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular