ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆಗೆ ಯತ್ನಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ನಗರದ ತಾಳೂರು ರಸ್ತೆಯ 14 ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಎಸ್ ಬಿ ಐ ಎಟಿಎಂ ಕೊಠಡಿಯ ಗ್ಲಾಸ್ ಒಡೆದು ಹಣ ದೋಚಲು ಖದೀಮರು ಯತ್ನಿಸಿ ಎಸ್ಕೇಪ್ ಆಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬೆರಳಚ್ಚು ತಂಡ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಕ್ಷಿಗಳನ್ನು ಕಲೆ ಹಾಕಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

