ಡಿಜಿಟಲ್ ಡೆಸ್ಲ್ : ಅತಿಯಾದ ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಬರುತ್ತದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಶಾಕಿಂಗ್ ಮಾಹಿತಿ ನೀಡಿದ್ದಾರೆ.ಅದರಲ್ಲೂ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಯಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ.
ಕೊಪ್ಪಳ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ರುದ್ರೇಶಪ್ಪ ಈ ಮಾಹಿತಿ ನೀಡಿದ್ದಾರೆ . ಕೊಪ್ಪಳ ಸೇರಿದಂತೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹಾಗೂ ಹುಟ್ಟುವ ಮಕ್ಕಳಲ್ಲಿ ರಕ್ತಹೀನತೆಯೂ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಪ್ರಮುಖ ಕಾರಣವೇ ಅತಿಯಾದ ಯೂರಿಯಾ ಬಳಕೆ ಮತ್ತು ಕಳೆನಾಶಕ ಬಳಕೆ ಎಂದಿದ್ದಾರೆ.
ಭೂಮಿಗೆ ಯೂರಿಯಾ ಗೊಬ್ಬರ, ಕೆಮಿಕಲ್ ಗಳನ್ನು ಅತಿಯಾಗಿ ಬಳಸುವುದರಿಂದ ಇಂತಹ ಕೆಮಿಕಲ್ ಯುಕ್ತ ಆಹಾರವನ್ನು ತಿನ್ನುವುದರಿಂದ ಕ್ಯಾನ್ಸರ್ ಕಾಯಿಲೆ ಬರುವ ಸಾಧ್ಯತೆ ಇದೆ. ಹಾಗಾಗಿ ಬೆಳೆಗಳಿಗೆ ಅತಿಯಾದ ಯೂರಿಯಾ ಬಳಸುವುದನ್ನು ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದರು.ಹೊಸಪೇಟೆ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ರಸಗೊಬ್ಬರ ಹೆಚ್ಚು ಬಳಸುವುದರಿಂದ ಕ್ಯಾನ್ಸರ್ ಬರುತ್ತೆ ವೈದ್ಯಕೀಯ ವರದಿಯಲ್ಲಿ ತಿಳಿದು ಬಂದಿದೆ. ರಸಗೊಬ್ಬರ ಮತ್ತು ಕೀಟನಾಶಕ ಹೆಚ್ಚು ಬಳಸುವುದರಿಂದ ಆಹಾರ ಧಾನ್ಯಗಳನ್ನು ಮನುಷ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದರು..