HomeLatest NewsBIG NEWS: ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಪ್ರಕರಣ: ಕೇಸ್ ನಲ್ಲಿ ಹುರುಳಿಲ್ಲ ಎಂದ ಸಿಐಡಿ

BIG NEWS: ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಪ್ರಕರಣ: ಕೇಸ್ ನಲ್ಲಿ ಹುರುಳಿಲ್ಲ ಎಂದ ಸಿಐಡಿ

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ನಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಐಡಿ ವರದಿ ನೀಡಿದೆ.

ಸಚಿವ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ, ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ. ಯಾವುದೇ ಸಾಕ್ಷ್ಯಗಳೂ ಇಲ್ಲ. ಪ್ರಕರಣದಲ್ಲಿ ಹುರುಳಿಲ್ಲ ಎಂದು ಸಿಐಡಿ ಡಿಜಿ & ಐಜಿಪಿಗೆ ವರದಿ ನೀಡಿದೆ.

ಕಳೆದ ವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ ತನಗೆ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಹೇಳಿದ್ದರು. ಸಚಿವರು ಗೃಹ ಸಚಿವರಿಗೆ ನೀಡಿದ್ದ ದೂರನ್ನು ಆಧರಿಸಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ರಾಜಣ್ಣ ದೂರಿನ ಮೇರೆಗೆ ಸಿಐಡಿ ಸ್ಥಳಮಹಜರು ನಡೆಸಿತ್ತು. ತನಿಖೆಯಲ್ಲಿ ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ವರದಿ ನೀಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular