HomeLatest NewsGOOD NEWS: ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ತಾಲ್ಲೂಕು ಆಸ್ಪತ್ರೆಗಳಲ್ಲಿ ದಿನವಿಡೀ ತಾಯಿ, ಮಗು...

GOOD NEWS: ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ತಾಲ್ಲೂಕು ಆಸ್ಪತ್ರೆಗಳಲ್ಲಿ ದಿನವಿಡೀ ತಾಯಿ, ಮಗು ಸೇವೆ ಲಭ್ಯ

ತಾಲ್ಲೂಕು ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗು ಸೇವೆಯು ದಿನವಿಡೀ ಲಭ್ಯವಿರಬೇಕು ಎಂಬ ವ್ಯವಸ್ಥೆ ತರಲು ನಿರ್ಧಾರ ಮಾಡಲಾಗಿದೆ.

ಅದರಂತೆ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಮಕ್ಕಳ ತಜ್ಞರನ್ನು ನೇಮಿಸಲಾಗುತ್ತದೆ. ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್‌ ಟೆಕ್ನಿಷಿಯನ್ಸ್‌, 1300 ಪಿಹೆಚ್‌ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಓಲಾ, ಉಬರ್‌ ಆ್ಯಪ್‌ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್‌ ಸೇವಾ ಗ್ರಾಹಕರಿಗೂ ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು ಕೂಡ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ಮುಂದೆ ಈ ವಾಹನಗಳು ಡಿಸಿ, ಸಿಇಒ, ಡಿಹೆಚ್‌ಒ ಕಂಟ್ರೋಲ್‌ ನಲ್ಲಿ ಇರಲಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular