HomeLatest NewsBREAKING : ರಾಜ್ಯದ ಗ್ರಾಮ ಪಂಚಾಯತ್ 'PDO' ಗಳ ವರ್ಗಾವಣೆ ಕುರಿತು ಸರ್ಕಾರದಿಂದ ಮಹತ್ವದ...

BREAKING : ರಾಜ್ಯದ ಗ್ರಾಮ ಪಂಚಾಯತ್ ‘PDO’ ಗಳ ವರ್ಗಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತ್ ಪಿಡಿಒ ಅಧಿಕಾರಿಗಳ ವರ್ಗಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ಆದೇಶ ಹೊರಡಿಸಲಾಗಿದೆ.

ಮೇಲಿನ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಆಗಸ್ಟ್-2025 ನೇ ಮಾಹೆಯ ಮೊದಲ ವಾರದಲ್ಲಿ http://rdprtransfer.karnataka.gov.in ನಲ್ಲಿ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿವರಗಳನ್ನು ಪರಿಶೀಲಿಸಿ ತಮ್ಮ ಹಂತದಲ್ಲಿ ಅನುಮೋದನೆ ನೀಡಲಾಗಿರುತ್ತದೆ. ಪ್ರಸ್ತುತ ಸದರಿ ಅನುಮೋದನೆ ನೀಡಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿವರಗಳಲ್ಲಿ ಯಾವುದೇ ಪ್ರಕಾರದ ಮಾಹಿತಿ ತಿದ್ದುಪಡಿ ಮಾಡಬೇಕಾಗಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ದಿನಾಂಕ:04.08.2025ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ.

ಮುಂದುವರೆದು ಈ ಪತ್ರದೊಂದಿಗೆ ಲಗತ್ತಿಸಿರುವ ನಮೂನೆ 1 ರಿಂದ 4 ರ ವರೆಗಿನ ನಮೂನೆಗಳಲ್ಲಿ ಮಾಹಿತಿಯನ್ನು ಕಡ್ಡಾಯವಾಗಿ ದಿನಾಂಕ: 04.08.2025ರ ಒಳಗೆ ಸಲ್ಲಿಸಲು ತಿಳಿಸಿದೆ. ದಿನಾಂಕ: 04.08.2025ರ ನಂತರ ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular