HomeLatest NewsGOOD NEWS : ರೈತರಿಗೆ ಗುಡ್ ನ್ಯೂಸ್ : ‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ...

GOOD NEWS : ರೈತರಿಗೆ ಗುಡ್ ನ್ಯೂಸ್ : ‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ಸಿಗಲಿದೆ ‘ಉಚಿತ ಪಹಣಿ’ ಪತ್ರ

ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬAಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ.

ಸಾರ್ವಜನಿಕರು ಈ ಬಗ್ಗೆ ಮದ್ಯವರ್ತಿಗಳಿಗೆ ಅವಕಾಶ ಕೊಡದೇ ನೇರವಾಗಿ ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳನ್ನು ಹಾಗೂ ರಾಜಸ್ವ ನಿರೀಕ್ಷಕರನ್ನು ಭೇಟಿ ಮಾಡಿ ಉಚಿತವಾಗಿ ನಿಮ್ಮ ಜಮೀನಿನ ಖಾತೆಯನ್ನು ಬದಲಾಯಿಸಿಕೊಳ್ಳಲು ತಿಳಿಸಿದೆ. ಇ-ಪೌತಿ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಹಾಗೂ ಇ-ಪೌತಿ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular