ರಾಜ್ಯದಲ್ಲಿ ಕೆಲಸದ ಅವಧಿ 12 ಗಂಟೆ ವಿಸ್ತರಣೆಗೆ ಕಾರ್ಮಿಕರ‌ ಒಪ್ಪಿಗೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೆಲಸದ ಅವಧಿ ವಿಸ್ತರಣೆಗೆ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಒಪ್ಪಿಗೆ ಕಡ್ಡಾಯವಾಗಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1961ರ ಕರ್ನಾಟಕ ಅಂಗಡಿ ಮತ್ತು ಸ್ಥಾಪನೆ ಕಾಯ್ದೆಗೆ ತಿದ್ದುಪಡಿ ತರುವ ಮತ್ತು ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ 9 ರಿಂದ 12 ಗಂಟೆಗೆ ಅಥವಾ ಐದು ದಿನಕ್ಕೆ 48 ಗಂಟೆ ಕೆಲಸ ಅವಧಿಗೆ ಹೆಚ್ಚಿಸಲು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಭಾಗಶಃ ಒಪ್ಪಿಕೊಂಡಿದೆ ಎಂದು. ಹೇಳಿದ್ದಾರೆ.

ಯಾವ ಕಂಪನಿ ಅಥವಾ ಕಾರ್ಖಾನೆ ತನ್ನ ಕಾರ್ಮಿಕರಿಂದ ಐದು ದಿನದಲ್ಲಿ 48 ಗಂಟೆ ಕೆಲಸ ಮಾಡಿಸಿಕೊಳ್ಳಬೇಕಾದರೆ ಕಾರ್ಮಿಕರ ಮತ್ತು ಕಾರ್ಮಿಕ ಸಂಘಟನೆಯ ಒಪ್ಪಿಗೆ ಕಡ್ಡಾಯವಾಗಿ ಪಡೆಯಬೇಕು. ಅಂತಹ ಕಂಪನಿ ಮತ್ತು ಕಾರ್ಖಾನೆಗಳು ಸರ್ಕಾರಕ್ಕೆ ಪತ್ರ ಬರೆದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರು ಮತ್ತು ಸಂಘಟನೆಗಳೊಂದಿಗೆ ಚರ್ಚೆ ನಡೆಸಿ ಅನುಮತಿ ನೀಡಲಾಗುವುದು. ಈ ವೇಳೆ ಸರ್ಕಾರ ರೂಪಿಸಿದ ಮಾರ್ಗಸೂಚಿ ಪಾಲಿಸಬೇಕಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದ ಕೆಲಸದ ಅವಧಿ ಹೆಚ್ಚಳ ಸಂಬಂಧ ಈಗಾಗಲೇ ಕಾರ್ಮಿಕ ಸಂಘಟನೆ ಕಂಪನಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಉತ್ಪಾದನೆ ಹೆಚ್ಚಳ ಮತ್ತು ಕಾರ್ಮಿಕರಿಗೆ ಎರಡು ದಿನ ರಜೆ ಸಿಗಲಿದೆ. ಹೀಗಾಗಿ ಕೆಲಸದ ಅವಧಿ ಹೆಚ್ಚಳ ಮಾಡಬೇಕೆಂದು ಕಂಪನಿಗಳು ತಿಳಿಸಿವೆ. ಆದರೆ ಒತ್ತಡ, ಅನಾರೋಗ್ಯ, ಕೌಟುಂಬಿಕ ಕಲಹದ ಬಗ್ಗೆ ಕಾರ್ಮಿಕ ಸಂಘಟನೆಗಳು ಕೆಲಸದ ಅವಧಿ ಹೆಚ್ಚಳದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read