ಬೆಂಗಳೂರು : 13 ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಘಟನೆ ಬೇಕಾ? ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಘಟನೆ ಬೇಕಾ? ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಬರುತ್ತಿದ್ದ 13 ವರ್ಷದ ಬಾಲಕನನ್ನ ಅಪಹರಣ ಮಾಡಿ, ಹಣಕ್ಕೆ ಬೇಡಿಕೆ ಇಟ್ಟು, ಕಡೆಗೆ ಬಾಲಕನ ಕತ್ತು ಕೊಯ್ದು ಕೊಲೆ ಮಾಡಿ ಮೃತದೇಹವನ್ನ ಪೆಟ್ರೋಲ್ ಹಾಕಿ ಸುಟ್ಟಿರುವ ದಾರುಣ ಘಟನೆ ಎಂತಹವರನ್ನೂ ಬೆಚ್ಚಿ ಬೀಳಿಸುತ್ತದೆ. ಗೃಹ ಸಚಿವ @DrParameshwara ಅವರೇ, ನಿಮ್ಮ ಇಲಾಖೆ ಎಚ್ಚೆತ್ತಿಕೊಳ್ಳಲು ಇನ್ನೂ ಎಷ್ಟು ಜನರ ಬಲಿಯಾಗಬೇಕು? ಇನ್ನು ಎಂತೆಂತಹ ದುರ್ಘಟನೆಗಳು ನಡೆಯಬೇಕು? ಎಂದು ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಘಟನೆ ಬೇಕಾ?
— R. Ashoka (@RAshokaBJP) August 1, 2025
ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಬರುತ್ತಿದ್ದ 13 ವರ್ಷದ ಬಾಲಕನನ್ನ ಅಪಹರಣ ಮಾಡಿ, ಹಣಕ್ಕೆ ಬೇಡಿಕೆ ಇಟ್ಟು, ಕಡೆಗೆ ಬಾಲಕನ ಕತ್ತು ಕೊಯ್ದು ಕೊಲೆ ಮಾಡಿ ಮೃತದೇಹವನ್ನ ಪೆಟ್ರೋಲ್ ಹಾಕಿ ಸುಟ್ಟಿರುವ… pic.twitter.com/ZqMEr8jGYm