HomeLatest Newsಮೀನುಗಾರಿಕೆ ಇಲಾಖೆಯಿಂದ  ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯಿಂದ  ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.64 ಹೆಕ್ಟೇರ್ ಗುರಿ ನೀಡಲಾಗಿದೆ.ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಸಾಮಾನ್ಯರಿಗೆ 4.80, ಸಾಮಾನ್ಯ ಮಹಿಳೆಗೆ 1.80, ಪರಿಶಿಷ್ಟ ಜಾತಿಗೆ 1.00, ಪರಿಶಿಷ್ಟ ಪಂಗಡಕ್ಕೆ 1.00 ಹೆಕ್ಟೇರ್ ಗುರಿ ನೀಡಲಾಗಿದೆ.

ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಕ್ಕೆ ಒಟ್ಟು 7.198 ಹೆಕ್ಟೇರ್ ಸಾಮಾನ್ಯರಿಗೆ 2.03, ಮಹಿಳೆಯರಿಗೆ 2.228, ಪರಿಶಿಷ್ಟ ಜಾತಿಗೆ 1.00 ಹಾಗೂ ಪರಿಶಿಷ್ಟ ಪಂಗಡಕ್ಕೆ 1.94 ಹೆಕ್ಟೇರ್ ಗುರಿ, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕ ಘಟಕದಲ್ಲಿ ಪರಿಶಿಷ್ಟ ಜಾತಿಗೆ 1 ಗುರಿ, ಹೊಸತಾದ ಮೀನುಮಾರಾಟ ಕಿಯೋಸ್ಕ್ ನಿರ್ಮಾಣ ಸಹಾಯಕ್ಕಾಗಿ ಪರಿಶಿಷ್ಟ ಜಾತಿಗೆ 1 ಘಟಕಗಳ ಗುರಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುತ್ತದೆ. ಆಸಕ್ತರು ಆ.20 ರೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಯನ್ನು ಪಡೆದು ಸಂಬAಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular