ಬೆಂಗಳೂರು : ಅತ್ಯಾಚಾರ ಕೇಸ್’ ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ಕೋರ್ಟ್ ತೀರ್ಪು ಸ್ವಾಗತಿಸಿ ನಟಿ ರಮ್ಯಾ ಪೋಸ್ಟ್ ಮಾಡಿದ್ದಾರೆ.
ಹೌದು, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಬೆನ್ನಲ್ಲೇ ನಟಿ ರಮ್ಯಾ ‘ಎಲ್ಲಾ ಮಹಿಳೆಯರಿಗೆ ನ್ಯಾಯ ಸಿಕ್ಕಿದೆ’ ಎಂದು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ನಾಳೆ ಪ್ರಜ್ವಲ್ ರೇವಣ್ಣ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ . ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ.
Justice served for all the women! https://t.co/6QFfwnutzS
— Ramya/Divya Spandana (@divyaspandana) August 1, 2025