ಬೆಂಗಳೂರು: ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಮೇಲೆಯೇ ಮಹಿಳೆಯೊಬ್ಬರು ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿ ನಡೆದಿದೆ.
ರೈಲಿಗಾಗಿ ಕಾಯುತ್ತಿದ್ದ ಮಹಿಳೆಗೆ ಏಕಾಏಕಿ ಹೆರಿಗೆ ಓವು ಕಾಣಿಸಿಕೊಂಡಿದೆ. ತಕ್ಷಣ ರೈಲ್ವೆ ಮಹಿಳಾ ಸಿಬ್ಬಂದಿ, ಪೊಲೀಸರು ಮಹಿಳೆಗೆ ಸಹಾಯ ಮಾಡಿದ್ದು, ಸಿಬ್ಬಂದಿಗಳ ನೆರವಿನಿಂದ ಪ್ಲಾಟ್ ಫಾರ್ಮ್ ನಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.
ಬಾಣಂತಿ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ರೈಲ್ವೆ ಹಾಗೂ ಪೊಲೀಸ್ ಮಹಿಳಾ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.