ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯದಿಂದ 2025-26ನೇ ಶೈಕ್ಷಣಿಕ ಸಾಲಿಗೆ ಬಳ್ಳಾರಿ ಜಿಲ್ಲೆಯ ಮಿಲಿಟರಿ ಪಿಂಚಣಿ ರಹಿತ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಕಲ್ಯಾಣ ನಿಧಿ ಮತ್ತು ವಿಶೇಷ ನಿಧಿಗಳಿಂದ ಶಿಷ್ಯವೇತನ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಪುಸ್ತಕ ಅನುದಾನ ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ ಜೆ.ಓ.ಸಿ/ ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನ ಮಾಡಲಾಗುವುದು.
ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಧಾರವಾಡ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ ನವೆಂಬರ್ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಅಥವಾ ದೂ.08362440176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.