ಕೊಡಗು: ಪಾಲಂಗಾಲ ಅರಣ್ಯ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲ್ಲಿ ನಡೆದಿದೆ.
ನಿರಂತರವಾಗಿ ಸುರುದ ಮಳೆಯಿಂದಾಗಿ ಪಾಲಂಗಾಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭೂಕುಸಿತವುಂಟಾಗಿದೆ. ಇದರಿಂದಾಗಿ ಕಾಡಂಚಿನ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಸದ್ಯ ಅರಣ್ಯ ಪ್ರದೇಶದಲ್ಲಿ ಭೂಕುಸಿತವಾಗಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.