ರೈತರಿಗೆ ಸಿಹಿ ಸುದ್ದಿ: ನಾಳೆ ಪ್ರಧಾನಿ ಮೋದಿಯಿಂದ ದೇಶಾದ್ಯಂತ 9.7 ಕೋಟಿ ಕೃಷಿಕರ ಖಾತೆಗೆ ಪಿಎಂ ಕಿಸಾನ್ 20ನೇ ಕಂತು ಜಮಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ನಾಳೆ ಭೇಟಿ ನೀಡಲಿದ್ದು, ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿಯವರು ವಾರಣಾಸಿ ಕಾರ್ಯಕ್ರಮದಲ್ಲಿ ಪಿಎಂ-ಕಿಸಾನ್ ನ 20 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ದೇಶಾದ್ಯಂತ 9.7 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 20,500 ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಲಾಗುವುದು. ಇದು ಯೋಜನೆಯಡಿ ಒಟ್ಟು ವಿತರಣೆಯನ್ನು 3.90 ಲಕ್ಷ ಕೋಟಿ ರೂ. ಮೀರಿಸುತ್ತದೆ.

ವಾರಣಾಸಿಯಲ್ಲಿ ರಸ್ತೆ ಸಂಪರ್ಕವನ್ನು ಸುಧಾರಿಸಲು, ಪ್ರಧಾನಿಯವರು ಹಲವಾರು ಮಹತ್ವದ ಮೂಲಸೌಕರ್ಯ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಾರಣಾಸಿ-ಭದೋಹಿ ರಸ್ತೆ ಮತ್ತು ಛಿತೌನಿ-ಶೂಲ್ ಟಂಕೇಶ್ವರ ರಸ್ತೆಯ ಅಗಲೀಕರಣ ಮತ್ತು ಬಲವರ್ಧನೆ ಮತ್ತು ಹರ್ದತ್‌ಪುರದಲ್ಲಿ ರೈಲ್ವೆ ಮೇಲ್ಸೇತುವೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಈ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಬಲಪಡಿಸುವ ಸಲುವಾಗಿ, ಪ್ರಧಾನಿಯವರು ಸ್ಮಾರ್ಟ್ ವಿತರಣಾ ಯೋಜನೆಯಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮತ್ತು 880 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿದ್ಯುತ್ ಮೂಲಸೌಕರ್ಯಗಳ ಭೂಗತೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ 47 ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read