ಬೆಂಗಳೂರು: ಆಗಸ್ಟ್ 5ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರಿಗೆ ಟಕ್ಕರ್ ಕೊಡಲು ಸರ್ಕಾರ ಮುಂದಾಗಿದೆ.
ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದ್ದು, ಇಂದು ಖಾಸಗಿ ಬಸ್ ಮಾಲೀಕರ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಲಾಗುವುದು.
ಸಾರಿಗೆ ಆಯುಕ್ತರಾದ ಯೋಗೀಶ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶಾಂತಿನಗರದ ಆಯುಕ್ತರ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಸಾರ್ವಜನಿಕರಿಗೆ ತೊಂದರೆತಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತಾಗಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.