HomeLatest Newsದೇಶವನ್ನೇ ಬೆಚ್ಚಿ ಬೀಳಿಸಿದ್ದ ಲೈಂಗಿಕ ದೌರ್ಜನ್ಯ ಕೇಸ್ ಅಪರಾಧಿ ಪ್ರಜ್ವಲ್ ರೇವಣ್ಣಗೆ ಇಂದು ಶಿಕ್ಷೆ ಪ್ರಕಟ:...

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲೈಂಗಿಕ ದೌರ್ಜನ್ಯ ಕೇಸ್ ಅಪರಾಧಿ ಪ್ರಜ್ವಲ್ ರೇವಣ್ಣಗೆ ಇಂದು ಶಿಕ್ಷೆ ಪ್ರಕಟ: ಕನಿಷ್ಠ 10 ವರ್ಷದಿಂದ ಜೀವಾವಧಿ ಶಿಕ್ಷೆ ಸಾಧ್ಯತೆ

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದೆ. ಮನೆ ಕೆಲಸದ ಮಹಿಳೆ ಬೆದರಿಸಿ ಅತ್ಯಾಚಾರ ಎಸೆಗಿರುವುದು ಸಾಬೀತಾಗಿದ್ದು, ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಶುಕ್ರವಾರ ನ್ಯಾಯಾಲಯ ಘೋಷಿಸಿದೆ.

47 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಸಂಬಂಧ ಶುಕ್ರವಾರ ಪ್ರಜ್ವಲ್ ರೇವಣ್ಣ ವಿರುದ್ಧ ಅಂತಿಮ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರದ ಸಂತೋಷ್ ಗಜಾನನ ಭಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಪ್ರಕಟಿಸಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು.

ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಒಂದು ವರ್ಷ ನಾಲ್ಕು ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೈಲುವಾಸ ಕಾಯಂ ಆಗಲಿದ್ದು, ಜಾಮೀನು ಸಿಗುವ ಬಾಗಿಲು ಮುಚ್ಚಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕನಿಷ್ಠ 10 ವರ್ಷದಿಂದ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಎಸ್.ಪಿ.ಪಿ. ಅಶೋಕ್ ನಾಯ್ಕ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular