ಧರ್ಮಸ್ಥಳ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಸಹಾಯವಾಣಿ ಆರಂಭಿಸುತ್ತಿದ್ದು, ಸಹಾಯವಾಣಿಗೆ ನೂರಾರು ಕರೆಗಳು ಬರುತ್ತಿದೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದ್ದು, ಈ ಕುರಿತು ಮಾಹಿತಿ ಇದ್ದರೆ ಹಂಚಿಕೊಳ್ಳಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.ದೂರವಾಣಿ ಸಂಖ್ಯೆ : 0824-2005301, 8277986369 ಇಮೇಲ್ ಐಡಿ : SITDPS@KSP.GOV.IN
ಎಸ್ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).
ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ತೀರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳ ತಂಡ 8ನೇ ಪಾಯಿಂಟ್ ನಲ್ಲಿ ಶೋಧಕಾರ್ಯವನ್ನು ಮುಕ್ತಾಯಗೊಳಿಸಿದೆ.
ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ಒಟ್ಟು 13 ಸ್ಥಳಗಳ ಬಗ್ಗೆ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಅಸ್ಥಿಪಂಜರಗಳಿಗಾಗಿ ಒಂದೊಂದೇ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಈಗಾಗಲೇ 7 ಸ್ಥಳಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರಗಳಿಗಾಗಿ ಶೋಧ ನಡೆಸಲಾಗಿದೆ. 6ನೇ ಪಾಯಿಂಟ್ ನಲ್ಲಿ ಮಾತ್ರ ಇಡಿದಾದ ಅಸ್ಥಿಪಂಜರ ಪತ್ತೆಯಾಗಿದೆ. ನಿನ್ನೆ 7ನೇ ಪಾಯಿಂಟ್ ನಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದು, ಈ ವೇಳೆ ಕರವಸ್ತ್ರವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದ್ದು, ಈ ಕುರಿತು ಮಾಹಿತಿ ಇದ್ದರೆ ಹಂಚಿಕೊಳ್ಳಬಹುದಾಗಿದೆ.#Dharmasthala #Helpline pic.twitter.com/3fjBPZGRGH
— DIPR Karnataka (@KarnatakaVarthe) July 31, 2025