ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿರುವ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲುವಾಸವೇ ಗತಿಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ, 11 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಎರಡು ಸೆಕ್ಷನ್ ನಲ್ಲಿ ಪ್ರಜ್ವಲ್ ರೇವಣ್ಣಗೆ 11 ಲಕ್ಷ ದಂಡ ವಿಧಿಸಲಾಗಿದ್ದು, ಅದರಲ್ಲಿ 7 ಲಕ್ಷ ರೂಪಾಯಿ ಸಂತ್ರಸ್ತೆಗೆ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಇನ್ನು ಈವರೆಗಿನ ಜೈಲು ಶಿಕ್ಷೆ ಮೈನಸ್ ಆಗಲ್ಲ ಎಂದು ತಿಳಿಸಿದೆ
ಕೆ.ಆರ್.ನಗರ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.