ಮಂಡ್ಯ: ಮಂಡ್ಯ ನಗರದ ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ನರ್ಸಿಂಗ್ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
21 ವರ್ಷದ ನಿಶ್ಕಲಾ ಆತ್ಮಹತ್ಯೆ ಮಾಡಿಕೊಂಡವರು. ಮಂಡ್ಯ ತಾಲೂಕಿನ ಗುನ್ನಾಯಕನಹಳ್ಳಿಯ ಯೋಗಾನಂದ, ಅಶ್ವಿನಿ ದಂಪತಿ ಪುತ್ರಿಯಾಗಿರುವ ನಿಶ್ಕಲಾ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದರು. ಹಾಸ್ಟೆಲ್ ನಲ್ಲಿ ಸಹಪಾಠಿ ಪಕ್ಕದ ಕೊಠಡಿಗೆ ಹೋಗಿದ್ದ ವೇಳೆಯಲ್ಲಿ ತನ್ನ ರೂಮ್ ನಲ್ಲಿದ್ದ ನಿಶ್ಕಲಾ ಕೊಠಡಿಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಭೇಟಿ ನೀಡಿ ಮಂಡ್ಯ ಪೂರ್ವ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ಕಳೆದ 10 ದಿನದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ಮೂಲದ ಮೆಡಿಕಲ್ ವಿದ್ಯಾರ್ಥಿ ಭರತ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು.
You Might Also Like
TAGGED:ವಿದ್ಯಾರ್ಥಿನಿ