ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಹೊಸ ವ್ಯವಸ್ಥೆ ರೂಪಿಸಲಾಗಿದೆ. ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಯನ್ನು ಗೃಹ ಇಲಾಖೆ ರಚನೆ ಮಾಡಿದೆ.
ಮಾದಕ ವಸ್ತುಗಳ ಬಳಕೆ, ಮಾರಾಟ ತಡೆಯಲು ಕಾರ್ಯಪಡೆ ರಚಿಸಲಾಗಿದೆ. ಮಾದಕ ವಸ್ತು ಸಂಬಂಧ ಕೇಸುಗಳ ಮೇಲ್ವಿಚಾರಣೆಗೆ ಕಾರ್ಯಪಡೆ ರಚಿಸಲಾಗಿದೆ. ಡಿಜಿ ಐಜಿಪಿ ನಿಗಾದಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತದೆ.
56 ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ ಕಾರ್ಯಪಡೆ ರಚನೆ ಮಾಡಲಾಗಿದೆ. ಇದರಲ್ಲಿ ಕಾರ್ಯಪಡೆಗೆ 10 ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ. ಉಳಿದ 56 ಹುದ್ದೆಗಳು ನಕ್ಸಲ್ ನಿಗ್ರಹ ಪಡೆಯಿಂದ ವರ್ಗಾವಣೆಯಾಗಲಿವೆ.