HomeLatest Newsದರ್ಶನ್ ಗೆ ಬೇಲ್ ಕೊಟ್ಟಂತೆ ನನಗೂ ಜಾಮೀನು ಕೊಡಿ: ಕೋರ್ಟ್ ಗೆ ಮನವಿ ಮಾಡಿದ ನೇಹಾ...

ದರ್ಶನ್ ಗೆ ಬೇಲ್ ಕೊಟ್ಟಂತೆ ನನಗೂ ಜಾಮೀನು ಕೊಡಿ: ಕೋರ್ಟ್ ಗೆ ಮನವಿ ಮಾಡಿದ ನೇಹಾ ಕೊಲೆ ಆರೋಪಿ

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್, ತನಗೆ ಜಾಮೀನು ನೀಡುವಂತೆ ಕೋರ್ಟ್ ಗೆ ಮೊರೆ ಹೋಗಿದ್ದಾನೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ಜಾಮೀನು ನೀಡಿ ಎಂದು ಆರೋಪಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.

ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ನಾಳೆ ಜಾಮೀನು ಅರ್ಜಿಯ ಅಂತಿಮ ಆದೇಶ ಹೊರಬೀಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ನೇಹಾತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್ ತಮ್ಮ ನಟನೆ, ಒಳ್ಳೆಯ ಕೆಲಸಗಳಿಂದ ಜನರಿಗೆ ಮಾದರಿಯಾಗಬೇಕಿತ್ತು. ಆದರೆ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಮಾದರಿಯಾಗಿದ್ದು ನಿಜಕ್ಕೂ ನೋವಿನ ವಿಷಯ. ನನ್ನ ಮಗಳಿಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular