ಬೆಂಗಳೂರು: 2025- 26ನೇ ಸಾಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ, ಖಾಸಗಿ ಆಯುರ್ವೇದ, ಯುನಾನಿ, ಹೋಮಿಯೋಪಥಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಪದ್ಧತಿ ವೈದ್ಯಕೀಯ ಮಹಾವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಆಯುಷ್ ಇಲಾಖೆಯಿಂದ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.
ಅಖಿಲ ಭಾರತ ಮಟ್ಟದ ಶುಲ್ಕ, ಮ್ಯಾನೇಜ್ಮೆಂಟ್ ಮತ್ತು ಎನ್.ಆರ್.ಐ. ಕೋರ್ಸ್ ಗಳಿಗೆ 2.50 ಲಕ್ಷ ರೂ. ಶುಲ್ಕ ನಿಗದಿಪಡಿಸಲಾಗಿದೆ. ಸ್ನಾತಕೋತ್ತರ ಪದವಿ ಕೊರ್ಸುಗಳಿಗೆ 2.50 ಲಕ್ಷ ರೂ.ಗಳಿಂದ 2.75 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ.
ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಶುಲ್ಕದಲ್ಲಿ ಹೆಚ್ಚಳ ಮಾಡದೆ ಕಳೆದ ವರ್ಷದ ಶುಲ್ಕ ಮುಂದುವರಿಸಲಾಗಿದೆ. ಖಾಸಗಿ ಆಡಳಿತ ಮಂಡಳಿಯವರು ಸರ್ಕಾರ ನಿಗದಿಪಡಿಸಿರುವ ಗರಿಷ್ಠ ವಾರ್ಷಿಕ ಶುಲ್ಕ ಮೊತ್ತಕ್ಕಿಂತ ಹೆಚ್ಚು ಹಣ ಪಡೆಯುವಂತಿಲ್ಲ ಎಂದು ಆಯುಷ್ ಇಲಾಖೆ ಸೂಚನೆ ನೀಡಿದೆ.