ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇದೊಂದು ಐತಿಹಾಸಿಕ ತೀರ್ಪು. ಪೊಲೀಸ್ ಇಲಾಖೆಗೂ ಕೀರ್ತಿ ಬಂದಂತಾಗಿದೆ. ಶೀಘ್ರವಾಗಿ ತನಿಖೆ ನಡೆಸಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿರುವುದು ಸಿಐಡಿ ಎಸ್ ಐಟಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇಂತಹ ಪ್ರಕರಣಗಳ್ಲಲಿ ವಿಚಾರಣೆ ವರ್ಷಾನುಗಟ್ಟಲೆ ನಡೆಯುತ್ತಲೇ ಇರುತ್ತದೆ. ಆದರೆ ನಮ್ಮ ಪೊಲೀಸರು ಅಚ್ಚುಕಟ್ಟಾಗಿ ಸಮರ್ಪಕವಾಗಿ ತನಿಖೆ ನಡೆಸಿ ಒಂದು ವರ್ಷ ನಾಲ್ಕು ತಿಂಗಳಲ್ಲಿ ಕೋರ್ಟ್ ತೀರ್ಪು ನೀಡುವಂತೆ ಮಾಡಿದಾರೆ. ನ್ಯಾಯಾಲಯಕ್ಕೆ ಎಸ್ ಐಟಿ ಎಲ್ಲಾ ದಾಖಲೆಗಳನ್ನು ಸಲ್ಲಿಸಿ, ತನಿಖೆ ವೇಗವಾಗಿ ಮುಗಿಸಿದ್ದಾರೆ ಹೀಗಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪ್ರಜ್ವಲ್ ರೇವಣ್ಣ ಕೇಸ್ ನ್ನು ರಾಅಜಕೀಯ ದೃಷ್ಟಿಕೋನದಿಂದ ನೋದಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ. ತನಿಖೆ ನಡೆಸಿದ ವಿಶೇಷ ತಂಡಕ್ಕೆ ಸಿಎಂ ಪದಕ ನೀಡಲಾಗುವುದು. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.