ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ(ಕಲ್ಯಾಣ ಕರ್ನಾಟಕ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ಲೋಕಸೇವಾ ಆಯೋಗವು 2024ರ ಸೆಪ್ಟೆಂಬರ್ 20ರಂದು ಹೊರಡಿಸಿದ್ದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ(ಕಲ್ಯಾಣ ಕರ್ನಾಟಕ) ಹುದ್ದೆಗಳ ನೇಮಕಾತಿ ಪರೀಕ್ಷೆ ಇದಾಗಿದೆ. ಸೆ. 6ರಂದು ಮಧ್ಯಾಹ್ನ 2 ರಿಂದ ಸಂಜೆ 4:00 ವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 7ರಂದು ಬೆಳಿಗ್ಗೆ 10 ರಿಂದ 11:30 ರವರೆಗೆ ಪತ್ರಿಕೆ 1ರ ಸಾಮಾನ್ಯ ಪತ್ರಿಕೆ ಮತ್ತು ಅದೇ ದಿನ ಮಧ್ಯಾಹ್ನ 2ರಿಂದ ಸಂಜೆ 4:00 ವರೆಗೆ ಪತ್ರಿಕೆ 2ರ ನಿರ್ದಿಷ್ಟ ಪತ್ರಿಕೆಯ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.